ಕಲಬುರಗಿ: ಟಿಪ್ಪರ್ ಹರಿದು ಬಾಲಕ ಮೃತ್ಯು
Update: 2022-03-27 21:19 IST
ಕಲಬುರಗಿ: ಇಲ್ಲಿನ ಹೀರಾಪುರ ಬಳಿಯ ಮೇಲ್ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದು ಪರಿಣಾಮ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಉದ್ರಿಕ್ತ ಗುಂಪು ಟಿಪ್ಪರ್‌ಗೆ ಬೆಂಕಿ ಹಚ್ಚಿದ ಘಟನೆ ರವಿವಾರ ನಡೆದಿದೆ.
ಮನೀಷ್ ಮಲ್ಲಿಕಾರ್ಜುನ (10) ಮೃತ ಬಾಲಕ.
ಪೋಷಕರ ಜೊತೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬಾಲಕ ಮುಂದೆ ಓಡಿದ್ದ. ಮೇಲ್ಸೇತುವೆ ಮೇಲಿಂದ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಕ್ರೋಶಗೊಂಡ ಸ್ಥಳೀಯರು ಟಿಪ್ಪರ್‌ಗೆ ಬೆಂಕಿ ಹಚ್ಚಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.