ಅಖಿಲ ಭಾರತ ಮುಷ್ಕರ ಯಶಸ್ವಿಗಾಗಿ ಸಿಐಟಿಯು ಕರೆ
Update: 2022-03-27 21:58 IST
ಉಡುಪಿ : ದೇಶ ಉಳಿಸಿ, ಜನತೆಯನ್ನು ರಕ್ಷಿಸಿ ಎಂಬ ಘೋಷಣೆ ಯೊಂದಿಗೆ ದೇಶದ ಕೇಂದ್ರ ಕಾರ್ಮಿಕ ಸಂಘಟನೆಗಳು ಮಾ.28 ಮತ್ತು 29 ರಂದು ನಡೆಸುತ್ತಿರುವ ಅಖಿಲ ಭಾರತ ಮುಷ್ಕರದ ಕರೆಯನ್ನು ಉಡುಪಿ ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕೆಂದು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಕರೆ ನೀಡಿದೆ.
ವಿವಿಧ ರಾಷ್ಟ್ರೀಯ ಹಾಗೂ ಕೆಲವು ಸ್ಥಳೀಯ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರವನ್ನು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ನಡೆಸಲಿದ್ದಾರೆ. ಮಾ.28ರಂದು ಕಾರ್ಖಾನೆಗಳಲ್ಲಿ, ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯಲಿದೆ. ಮಾ.29ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.