ರಹೀಂ ಉಚ್ಚಿಲ್‌ಗೆ ಕರ್ನಾಟಕ ಪ್ರೈಡ್ ಪ್ರಶಸ್ತಿ ಪ್ರದಾನ
Update: 2022-03-28 18:47 IST
ಮಂಗಳೂರು : ಏಷಿಯಾ ಟುಡೇ ರೀಸರ್ಚ್ ಮತ್ತು ಮೀಡಿಯಾ ಸಂಸ್ಥೆ ವತಿಯಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರಿಗೆ ಕರ್ನಾಟಕ ಪ್ರೈಡ್ ಪ್ರಶಸ್ತಿಯನ್ನು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಚಿತ್ರನಟ ಅಜಯ್ ರಾವ್ ಮತ್ತಿತರರು ಉಪಸ್ಥಿತರಿದ್ದರು.