×
Ad

ದಿನೇಶ್ ಕನ್ಯಾಡಿ ಹತ್ಯೆ ಪ್ರಕರಣ; ಸೂಕ್ತ ನ್ಯಾಯಕ್ಕಾಗಿ ಮಂಗಳೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

Update: 2022-03-29 20:04 IST

ಮಂಗಳೂರು : ಬೆಳ್ತಂಗಡಿ ತಾಲೂಕಿನ ದಲಿತ ವ್ಯಕ್ತಿ ದಿನೇಶ್ ಕನ್ಯಾಡಿಯ ಹತ್ಯೆ ಕೃತ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕೊಡು ವಂತೆ ಆಗ್ರಹಿಸಿ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಮಂಗಳವಾರ  ಬೆಳಗ್ಗೆ ಬೆಳ್ತಂಗಡಿಯಿಂದ ಹೊರಟ ಜಾಥಾವು ಸಂಜೆ ನಗರದ ಕ್ಲಾಕ್‌ಟವರ್ ಬಳಿ ಸಮಾಪನಗೊಂಡಿತು. ಈ ಸಂದರ್ಭ ಜಮಾಯಿಸಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ಮಾತನಾಡಿದರು.

ದಿನೇಶ್ ಕನ್ಯಾಡಿ ಕುಟುಂಬಕ್ಕೆ ಸರಕಾರ ೨ ಎಕರೆ ಜಮೀನು ನೀಡಬೇಕು. ೫೦ ಲಕ್ಷ ರೂ. ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡಬೇಕು, ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಪ್ರತಿಭಟನಾಕಾರರು ಸರಕಾರದ ಮುಂದಿಟ್ಟರು. ಜಿಲ್ಲಾಧಿಕಾರಿಯ ಪರವಾಗಿ ಮಂಗಳೂರು ಸಹಾಯಕ ಆಯುಕ್ತರು ಮನವಿ ಸ್ವೀಕರಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶು ಲತೀಫ್ ಪುತ್ತೂರು, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ, ಅಶ್ರಫ್ ಮಾಚಾರ್, ಶಾಫಿ ಬೆಳ್ಳಾರೆ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆ ಮಜಲ್, ಸುಹೈಲ್ ಪಳ್ನಿರ್, ರಾಜ್ಯ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ, ರಿಯಾಝ್ ಕಡಂಬು, ವಿಧಾನ ಸಭಾ ಕ್ಷೇತ್ರಾಧ್ಯಕ್ಷರಾದ ಇಬ್ರಾಹಿಂ ಸಾಗರ್, ಇರ್ಷಾದ್ ಅಜ್ಜಿನಡ್ಕ, ಶಾಹುಲ್ ಎಸ್. ಎಚ್, ನಿಸಾರ್ ಕುದ್ರಡ್ಕ, ಯಾಸೀನ್ ಅರ್ಕುಳ, ಆಸಿಫ್ ಕೋಟೆಬಾಗಿಲು, ಇಕ್ಬಾಲ್ ಬೆಳ್ಳಾರೆ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News