ಎಸೆಸೆಲ್ಸಿ ಪರೀಕ್ಷೆಗೆ ಹಿಜಾಬ್‌ ಧರಿಸಿದ್ದವರಿಗೆ ಅವಕಾಶ: ಇಬ್ಬರು ಮುಖ್ಯ ಅಧೀಕ್ಷಕರು, ಐವರು ಶಿಕ್ಷಕರ ಅಮಾನತು

Update: 2022-03-29 16:47 GMT
ಸಾಂದರ್ಭಿಕ ಚಿತ್ರ

ಗದಗ:  ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪರೀಕ್ಷಾ ಕೇಂದ್ರದ ಇಬ್ಬರು ಮುಖ್ಯ ಅಧೀಕ್ಷಕರು ಹಾಗೂ ಐವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಗದಗ ನಗರದ ಸಿಎಸ್ ಪಾಟೀಲ್ ಬಾಲಕರ ಹಾಗೂ ಬಾಲಕಿಯರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ  ಎಸೆಸೆಲ್ಸಿ ಪರೀಕ್ಷೆಯ ಮೊದಲ ದಿನವಾದ ಸೋಮವಾರ  ಹಿಜಾಬ್ ಹಾಕಿಕೊಂಡು ಕೆಲ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೊಠಡಿಯಲ್ಲಿ ಅವಕಾಶ ನೀಡಿದಕ್ಕೆ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಾದ ಎಸ್‌.ಯು.ಹೊಕ್ಕಳದ, ಎಸ್‌.ಎಂ.ಪತ್ತಾರ, ಎಸ್‌.ಜಿ.ಗೋಡಕೆ, ಎಸ್‌.ಎಸ್‌.ಗುಜಮಾಗಡಿ, ವಿ.ಎನ್‌.ಕಿವುಡರ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಗದಗ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ.

ಈ ಎರಡೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಭಜಂತ್ರಿ ಮತ್ತು ಬಿ.ಎಸ್‌.ಹೊನಗುಡಿ ಅವರನ್ನು ಸಹ ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News