ಎಸೆಸೆಲ್ಸಿ ದ್ವಿತೀಯ ಭಾಷಾ ಪರೀಕ್ಷೆ ಆರಂಭ; ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ
Update: 2022-03-30 10:53 IST
ಮಂಗಳೂರು, ಮಾ. 30: ಪ್ರಸಕ್ತ ಸಾಲಿನ ಎಸೆಸೆಲ್ಸಿಯ ದ್ವಿತೀಯ ಭಾಷಾ ಪರೀಕ್ಷೆ ಇಂದು ಆರಂಭವಾಗಿದೆ. ದ.ಕ. ಜಿಲ್ಲೆಯಲ್ಲಿ 99 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾರಂಭಿಸಿದ್ದಾರೆ.
ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಯನ್ನು ಒದಗಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೊಂದಾಯಿಸಿದ್ದಾರೆ. ಮಾ. 28ರಂದು ನಡೆದ ಪ್ರಥಮ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರಾಗಿದ್ದರು.