ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಎಫ್ ಐಆರ್

Update: 2022-03-30 07:55 GMT
ಅರುಣ್ ಬಡಿಗೇರ್ | ರಂಗನಾಥ್

ಯಾದಗಿರಿ: ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯ ಮುಖ್ಯಸ್ಥ ಎಚ್ ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ 'ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ' ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೂಲಕ ಅವರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆಯಾಗಿದೆ ಎಂದು ಆರೋಪಿಸಿ ಈ ಸಂಬಂಧ ಬಂದೇ ನವಾಝ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. 

ದೂರುದಾರರ ಪರ ವಕೀಲ ಮುಹಮ್ಮದ್ ಗೌಸ್ ಅವರ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಮಾ. 24ರಂದು ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ) 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿತ್ತು.

ಇದನ್ನೂ ಓದಿ:  ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News