ಕಲಬುರಗಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ; ಶಿಕ್ಷಕ ಅಮಾನತು
Update: 2022-03-30 14:06 IST
ಕಲಬುರಗಿ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಕಲಬುರಗಿ ಜೇವರ್ಗಿಯ ಇಜೇರಿ ಗ್ರಾಮದ ಉರ್ದು ಶಾಲೆಯ ಶಿಕ್ಷಕ ಮುಹಮ್ಮದ್ ಅಲಿ ಅವರನ್ನು ಬಿಇಓ ಶಾಂತಪ್ಪ ಗಂಗಪ್ಪ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಯನ್ನು ಎಸೆಸೆಲ್ಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟು ನ್ಯಾಯಾಲದ ಆದೇಶ ಉಲ್ಲಂಘಿಸಿದ್ದಾರೆ ಎಂದು ಶ್ರೀರಾಮ ಸೇನೆಯ ನಿಂಗಣ್ಣಗೌಡ ಪಾಟೀಲ್ ಬಿಇಓ ಗೆ ಶಿಕ್ಷಕನ ಅಮಾನತು ಮಾಡಬೇಕೆಂದು ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಸದ್ಯ ತನಿಖೆ ನಡೆಸುತ್ತಿರುವುದಾಗಿ ಬಿಇಓ ಶಾಂತಪ್ಪ ಗಂಗಪ್ಪ ಮಾಹಿತಿ ನೀಡಿದರು.
ಇದನ್ನೂ ಓದಿ: ಎಸೆಸೆಲ್ಸಿ ಪರೀಕ್ಷೆಗೆ ಹಿಜಾಬ್ ಧರಿಸಿದ್ದವರಿಗೆ ಅವಕಾಶ: ಇಬ್ಬರು ಮುಖ್ಯ ಅಧೀಕ್ಷಕರು, ಐವರು ಶಿಕ್ಷಕರ ಅಮಾನತು