ಬೆಂವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್ ನೇಮಕ ರದ್ದು ವಿಚಾರ: ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ
ಬೆಂಗಳೂರು, ಮಾ.30: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯಿಂದ ಪ್ರೊ.ಕೆ.ಆರ್.ವೇಣುಗೋಪಾಲ್ ಅವರನ್ನು ಅಸಿಂಧುಗೊಳಿಸಿ ರಾಜ್ಯ ಹೈಕೋರ್ಟ್‍ನ ವಿಭಾಗೀಯ ಪೀಠ ನೀಡಿದ್ದ ತೀರ್ಪಿಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕುಲಪತಿ ಹುದ್ದೆಗೆ ಪ್ರೊ.ಕೆ.ಆರ್.ವೇಣುಗೋಪಾಲ್ ಅವರ ನೇಮಕವನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‍ನ ವಿಭಾಗೀಯ ಪೀಠ ಮಾ.16ರಂದು ತೀರ್ಪು ನೀಡಿತ್ತು. ಆದರೆ, ಬೆಂ.ವಿವಿ ಆರ್ಥಿಕ ಬಜೆಟ್ ಮಂಡನೆಗೆ ಅನುಮೋದನೆ ನೀಡುವುದು ಮತ್ತು ಎ.8ರಂದು ವಿವಿಯ ಘಟಿಕೋತ್ಸವ ಇರುವುದರಿಂದ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ವೇಣುಗೋಪಾಲ್ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ವೇಣುಗೋಪಾಲ್ ಜತೆಗೆ ರಾಜ್ಯಪಾಲರು ಮತ್ತು ರಾಜ್ಯ ಸರಕಾರ ಕೂಡ ಮೇಲ್ಮನವಿ ಮಾಡಿದ್ದರು. ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ರಹಮತ್ ಉಲ್ಲಾ ಕೊತ್ವಾಲ್ ವಾದ ಮಂಡಿಸಿದ್ದರು. ಇದರೊಂದಿಗೆ ಬೆಂವಿವಿಯಲ್ಲಿ ಸುಗಮ ಕಾರ್ಯನಿರ್ವಹಣೆಗಾಗಿ ಹಿರಿಯ ಜೇಷ್ಠತೆ ಆಧಾರದಲ್ಲಿ ಪ್ರಭಾರ ಕುಲಪತಿಯನ್ನಾಗಿ ನೇಮಿಸುವ ಮೂಲಕ ಮಧ್ಯಂತರ ವ್ಯವಸ್ಥೆ ಮಾಡಬೇಕಿದೆ.