ಬೆಂಗಳೂರು: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Update: 2022-03-31 11:23 IST
ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅನಿಲ ಸಿಲಿಂಡರ್ ಗೆ ಘಂಟೆ ಬಾರಿಸಿ ಆರತಿ ಬೆಳಗಿ, ತಟ್ಟೆ ಬಡಿದು ಪ್ರತಿಭಟನೆ ಮಾಡಿದ್ದು ವಿಶೇಷವಾಗಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.