×
Ad

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಮ್. ಇಬ್ರಾಹೀಂ ರಾಜೀನಾಮೆ

Update: 2022-03-31 12:48 IST

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಪರಿಷತ್ ಸದಸ್ಯ ಸಿ.ಎಮ್. ಇಬ್ರಾಹೀಂ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ವಿಧಾನಸೌಧದ ಸಭಾಪತಿ ಬಸವರಾಜ ಕಚೇರಿಗೆ ತೆರಳಿದ ಅವರು ಎರಡೇ ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇಬ್ರಾಹೀಂ ಅವರ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೇ ಸಂದರ್ಭದಲ್ಲಿ ಅಂಗೀಕರಿಸಿದ್ದು ನಡೆಯಿತು.

ಇಬ್ರಾಹೀಂ ಕಾಂಗ್ರೆಸ್ ವಿರುದ್ಧ ಅಸಮಾಧಗೊಂಡಿದ್ದರು. ಇತ್ತಿಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News