ಆಂಧ್ರದ ಶ್ರೀಶೈಲದಲ್ಲಿ ತಂಡಗಳ ಮಧ್ಯೆ ಹೊಡೆದಾಟ ; ವಾಹನಗಳಿಗೆ ಹಾನಿ
Update: 2022-03-31 13:42 IST
ಬಾಗಲಕೋಟೆ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲದಲ್ಲಿ ಬುಧವಾರ ತಡರಾತ್ರಿ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, ಯುವಕನೋರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕರ್ನಾಟಕದಿಂದ ತೆರಳಿದ್ದ ಪಾದಯಾತ್ರಿಗಳು ಹಾಗೂ ಸ್ಥಳೀಯ ವ್ಯಾಪಾರಸ್ಥರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಬಾಗಲಕೋಟೆ ಜಿಲ್ಲೆಯ ಯುವಕನೋರ್ವ ಗಾಯಗೊಂಡಿದ್ದಾನೆ ಎಂದು ಇಲ್ಲಿನ ಠಾಣೆ ಪೊಲೀಸರು ತಿಳಿಸಿದ್ದಾರೆ.
ಘರ್ಷಣೆಯ ವೇಳೆ ವಾಹನಗಳಿಗೆ ಹಾನಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
'ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಾಟ ಮಾಡುತ್ತಿರುವುದನ್ನು ಪಾದಯಾತ್ರಿಗಳು ಪ್ರಶ್ನಿಸಿದ್ದು ಜಗಳಕ್ಕೆ ಕಾರಣವಾಗಿದೆ. ಈ ವೇಳೆ ಯುವಕನೋರ್ವ ಗಾಯಗೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.