ಸತ್ತಿಕಲ್ಲು ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ

Update: 2022-03-31 11:40 GMT

ವಿಟ್ಲ : ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಹಮೀದ್(60) ಹೃದಯಘಾತದಿಂದ  ಸೌದಿ ಅರೇಬಿಯಾದ ರಿಯಾದ್ ನಲ್ಲಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ 30 ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಚಾಲಕ ವೃತ್ತಿಯಲ್ಲಿದ್ದ ಹಮೀದ್ ರಜೆಯಲ್ಲಿ ಊರಿಗೆ ಬಂದಿದ್ದು ಡಿಸೆಂಬರ್ ಕೊನೆಯಲ್ಲಿ ರಿಯಾದ್ ಗೆ ತೆರಳಿದ್ದರು. ಗುರುವಾರ ಬೆಳಗ್ಗೆ ಹೃದಯಾಘಾತ ರಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News