ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ
Update: 2022-03-31 18:50 IST
ತುಮಕೂರು: ಮಾ. 31: ಎಐಸಿಸಿ ನಾಯಕ ರಾಹುಲ್ ಗಾಂಧಿ ಗುರುವಾರ ಸಂಜೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಅಲ್ಲಿಂದ ಸಿದ್ದಗಂಗಾ ಮಠಕ್ಕೆ ರಸ್ತೆ ಮಾರ್ಗದ ಮೂಲಕ ಆಗಮಿಸಿದರು.
ಈ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್,ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.