ರಾಜ್ಯದಲ್ಲಿ ಗುರುವಾರ 78 ಮಂದಿಗೆ ಕೊರೋನ ದೃಢ; ಓರ್ವ ಮೃತ್ಯು

Update: 2022-03-31 16:32 GMT

ಬೆಂಗಳೂರು, ಮಾ.31: ರಾಜ್ಯದಲ್ಲಿ ಗುರುವಾರ 78 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಓರ್ವ ಸಾವನ್ನಪ್ಪಿದ್ದು, 93 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3945514ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,054ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,569ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಓರ್ವನ ಸಾವು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 78 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 67, ಚಿಕ್ಕಮಗಳೂರು 1, ಚಿತ್ರದುರ್ಗ 1, ದಕ್ಷಿಣಕನ್ನಡ 2, ಕೋಲಾರ 3, ಮೈಸೂರು 2, ಉಡುಪಿ  ಜಿಲ್ಲೆಯಲ್ಲಿ ಒಂದು  ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 67 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 67 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,63.234 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,81,640 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,960 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News