×
Ad

ರತನ್ ಟಾಟಾಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಮನವಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

Update: 2022-03-31 22:51 IST

ಹೊಸದಿಲ್ಲಿ, ಮಾ. 31: ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಸ್ವೀಕರಿಸಲು ದಿಲ್ಲಿ ಉಚ್ಚ ನ್ಯಾಯಾಲಯ ಗುರುವಾರ ನಿರಾಕರಿಸಿದೆ. 

ಓರ್ವ ವ್ಯಕ್ತಿಗೆ ಅತ್ಯುಚ್ಚ ನಾಗರಿಕ ಪ್ರಶಸ್ತಿ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡುವುದು ನ್ಯಾಯಾಲಯದ ಕೆಲಸವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ಹೇಳಿದೆ. ‘‘ಇದು ಯಾವ ರೀತಿಯ ಅರ್ಜಿ ? ಇದನ್ನು ನ್ಯಾಯಾಲಯ ನಿರ್ದೇಶಿಸಬೇಕೇ? (ಭಾರತ ರತ್ನ ನೀಡಲು ಸರಕಾರಕ್ಕೆ)’’ ಎಂದು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರನ್ನು ಒಳಗೊಂಡ ಪೀಠ ಹೇಳಿದೆ. 

ಸರಕಾರಕ್ಕೆ ಮನವಿಯನ್ನಾದರೂ ಮಾಡಿ ಎಂದು ದೂರುದಾರರ ಪರ ನ್ಯಾಯವಾದಿ ನ್ಯಾಯಾಲಯವನ್ನು ಆಗ್ರಹಿಸಿದರು. ‘‘ಹೋಗಿ ಮನವಿ ಮಾಡುವುದಾದರೆ, ನ್ಯಾಯಾಲಯದ ಮೆಟ್ಟಿಲೇರುವ ಪ್ರಶ್ನೆ ಎಲ್ಲಿದೆ?’’ ಎಂದು ನ್ಯಾಯಮೂರ್ತಿ ಹೇಳಿದರು. ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದ ಬಳಿಕ ದೂರುದಾರ ಪರ ವಕೀಲ ಅರ್ಜಿಯನ್ನು ಹಿಂಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News