×
Ad

ಪುನೀತ್ ರಾಜಕುಮಾರ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ

Update: 2022-03-31 23:48 IST
photo- twitter

ಬೆಂಗಳೂರು: ದಿವಂಗತ ನಟ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ  ಕಾಂಗ್ರೆಸ್ ರಾಷ್ಟ್ರೀಯ ನಾಯಕ  ರಾಹುಲ್ ಗಾಂಧಿ  ಭೇಟಿ ನೀಡಿದ್ದಾರೆ. 

ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ,   ರಾತ್ರಿ ವೇಳೆಗೆ ಬೆಂಗಳೂರಿಗೆ ಆಗಮಿಸಿ  ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News