ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

Update: 2022-04-01 07:08 GMT

ತುಮಕೂರು, ಎ.1: ಶಾಲೆಗಳಲ್ಲಿ ಸರಕಾರ ನೀಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯ 115ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ 'ನಡೆದಾಡೋ ದೇವರ ಬಸವ ಭಾರತ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಸರಕಾರದ ಬಿಸಿಯೂಟ ಯೋಜನೆಗೆ ಸಿದ್ದಗಂಗಾ ಶ್ರೀ ಹೆಸರಿಡಲು ಸರಕಾರ ಬದ್ಧ. ಶೀಘ್ರದಲ್ಲಿಯೇ ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News