ಎ.4ರಂದು ಬಿಸಲಕೊಪ್ಪದಲ್ಲಿ ʼಅರಣ್ಯವಾಸಿಗಳನ್ನ ಉಳಿಸಿʼ ಜಾಥ.

Update: 2022-04-01 11:53 GMT

ಶಿರಸಿ : ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನ ಉಳಿಸಿ- ಜಾಥ ಕಾರ್ಯಕ್ರಮ ಎ.4ರಂದು ಮಧ್ಯಾಹ್ನ 3.30ಕ್ಕೆ ಬಿಸಲಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಹೋರಾಟದ ವಾಹಿನಿ ಸಂಚರಿಸಿ ವ್ಯಾಪಕವಾದ ಜನಜಾಗೃತಿ ಕಾರ್ಯಕ್ರಮ ಜರುಗಿಸಿದ್ದು ಶಿರಸಿ ತಾಲೂಕಿನಲ್ಲಿ ಪ್ರಥಮವಾಗಿ ಬಿಸಲಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯವಾಸಿಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅರಣ್ಯವಾಸಿಗಳಿಗೆ ಸಮಸ್ಯೆಗಳಿಗೆ ಸ್ಫಂದಿಸುವ, ಅರಣ್ಯಹಕ್ಕು ಕಾಯಿದೆ ಕುರಿತು ಮಾಹಿತಿ, ಅರಣ್ಯಸಿಬ್ಬಂದಿಗಳ ದೌರ್ಜನ್ಯದ ಕುರಿತು ಪರಿಹಾರ, ಅರಣ್ಯ ಹಕ್ಕು ಮಂಜೂರಿ ಕುರಿತು ಕಾನೂನಾತ್ಮಕ ತಿಳುವಳಿಕೆಯನ್ನ ಅರಣ್ಯವಾಸಿಗಳಿಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News