×
Ad

ಸರಕಾರಿ ತಾಯಿ-ಮಕ್ಕಳ ಆಸ್ಪತ್ರೆ ನಿರ್ವಹಣೆ ಕುರಿತು ಸಮಾಲೋಚನೆ

Update: 2022-04-01 19:46 IST

ಉಡುಪಿ : ಇದೀಗ ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದುಕೊಂಡಿರುವ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ಮುಂದಿನ ನಿರ್ವಹಣೆಯ ಕುರಿತಂತೆ ಇಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಖಾಸಗಿ ಸಂಸ್ಥೆಯ ಆರ್ಥಿಕ ದುಸ್ಥಿತಿಯ ಕಾರಣದಿಂದ ಅನೇಕ ಸಮಸ್ಯೆಗಳಿಗೆ ಸಿಲುಕಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರಕ್ಕೆ ಹಸ್ತಾಂತರ ಮಾಡಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿತ್ತು.

ಆಸ್ಪತ್ರೆಯ ಮುಂದಿನ ನಿರ್ವಹಣೆಯ ಕುರಿತಂತೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಭವಿಷ್ಯದ ಆಸ್ಪತ್ರೆಯ ನಿರ್ವಹಣೆ ಕುರಿತಂತೆ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.  ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ಇತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News