×
Ad

ಎ.3ಕ್ಕೆ ಕೃಷಿ ಸಚಿವರು ಉಡುಪಿ ಜಿಲ್ಲೆಗೆ

Update: 2022-04-01 20:36 IST

ಉಡುಪಿ, ಎ.೧: ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್ ಅವರು ಎ.೩ ಮತ್ತು ೪ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಎ.೩ರಂದು ಸಂಜೆ ೫:೩೦ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಬೈಂದೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. 

ಎ.೪ರಂದು ಬೆಳಗ್ಗೆ ೧೦:೩೦ಕ್ಕೆ ಬೈಂದೂರು ತಾಲೂಕು ಉಪ್ಪುಂದ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್‌ನ ನೂತನ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಹಿರೇಕೆರೂರಿಗೆ ತೆರಳಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News