ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ
Update: 2022-04-01 20:47 IST
ಉಡುಪಿ : ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಜಿಲ್ಲೆಯ ಪರಿಶಿಷ್ಟ ಜಾತಿ/ ಪ.ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ಬಾಬು ಜಗಜೀವನರಾಂ ಅವರ ೧೧೫ನೇ ಜನ್ಮ ದಿನೋತ್ಸವದ ಆಚರಣಾ ಸಮಾರಂಭ ಎ.5ರಂದು ಬೆಳಗ್ಗೆ ೧೦ ಗಂಟೆಗೆ ಉಡುಪಿ ಕುಂಜಿಬೆಟ್ಟಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.