×
Ad

ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನದ ಗುರಿ ನೀಡಿದ ಅಮಿತ್ ಶಾ

Update: 2022-04-01 22:39 IST

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿಯನ್ನಿಟ್ಟುಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ. ಹೀಗಾಗಿ, ರೂಟ್ ಮ್ಯಾಪ್ ತಯಾರಿಸಿ ಚುನಾವಣೆ ನಿಲ್ಲಲು ಸಿದ್ಧತೆ ನಡೆಸುತ್ತೇವೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. 

ಬಿಜೆಪಿಯ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ  104 ಸ್ಥಾನಗಳನ್ನು ಗೆದ್ದಿದೆ. ಈ ಬಾರಿ 120 ಸ್ಥಾನಗಳನ್ನು ಗೆಲ್ಲುವ ಗುರಿಯನ್ನಿಟ್ಟುಕೊಂಡಿದ್ದಿರಿ. ಆದರೆ, 120 ಸ್ಥಾನಗಳ ಬದಲಾಗಿ 150 ಸ್ಥಾನಗಳನ್ನು ಗೆಲ್ಲಬೇಕೆಂದು ಅಮಿತ್ ಷಾ ಅವರು ಹೇಳಿದ್ದಾರೆ ಎಂದು ತಿಳಿಸಿದರು. 

ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗಮನಿಸಿದಾಗ ಬಿಜೆಪಿ ಪರವಾದ ವಾತಾವರಣವಿದೆ. ಕಾಂಗ್ರೆಸ್ ಪಕ್ಷ ಹೆಚ್ಚು ಸೀಟುಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಅಲ್ಲದೆ, ಬೇರೆ ಪಕ್ಷದಿಂದ ಬಿಜೆಪಿಗೆ ಹಲವರು ಮುಂದಾಗಿದ್ದಾರೆ ಎಂದು ಹೇಳಿದರು.  

ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಮಾರ್ಗದರ್ಶನಲ್ಲಿ ನಾವುಗಳು ನಡೆಯುತ್ತೇವೆ ಎಂದರು. 

ಕೋರ್ ಕಮಿಟಿ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News