ಬೆಂಗಳೂರು: ದರೋಡೆಗೆ ಸಂಚು; ಇಬ್ಬರು ರೌಡಿಶೀಟರ್ ಗಳ ಬಂಧನ
Update: 2022-04-02 15:29 IST
ಬೆಂಗಳೂರು, ಎ.2: ದರೋಡೆಗೆ ಸಂಚು ಹಾಕುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ವೈಯಾಲಿಕಾವಲ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಮನೋಜ್ ಯಾನೆ ಮನು ಮತ್ತು ಶೇಖರ್ ಎಂಬವರನ್ನು ಬಂಧಿಸಲಾಗಿದೆ.
ಸಾರ್ವಜನಿಕರ ಚಿನ್ನಾಭರಣ ದೋಚಲು ಹೊಂಚು ಹಾಕಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರ ಪೈಕಿ ರೌಡಿ ಶೀಟರ್ ಮನು ವಿರುದ್ಧ ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಕೊಲೆ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.