ಎ.5ರಂದು ಸಾಹಿತಿ ಎಸ್.ಎಲ್. ಭೈರಪ್ಪ ಅಧ್ಯಕ್ಷತೆಯಲ್ಲಿ ʼಕನ್ನಡ ಶಾಲೆ ಉಳಿಸಿʼ ದುಂಡು ಮೇಜಿನ ಸಭೆ

Update: 2022-04-02 10:30 GMT
ಎಸ್.ಎಲ್. ಭೈರಪ್ಪ

ಬೆಂಗಳೂರು : ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಶಾಲೆ ಉಳಿಸಿ, ಬೆಳೆಸುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಎ.5ರಂದು ದುಂಡು ಮೇಜಿನ ಸಭೆ ಏರ್ಪಡಿಸಲಾಗಿದೆ.

ಬೆಂಗಳೂರುನಲ್ಲಿರುವ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಭೆ ಉದ್ಘಾಟಿಸಲಿದ್ದಾರೆ.

ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹಾಗೂ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.  ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಾದ ಎನ್. ಕುಮಾರ್ ಹಾಗೂ ನಾಗಮೋಹನ್ ದಾಸ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ವಿದ್ವಾಂಸ ಪ್ರಧಾನ ಗುರುದತ್ತ ಅವರು ವಿಶೇಷ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಶಿಕ್ಷಣ ತಜ್ಞರು, ಸಾಹಿತಿಗಳು, ನ್ಯಾಯಮೂರ್ತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು ಒಳಗೊಂಡಂತೆ 27 ಮಂದಿ ಸಭೆಯಲ್ಲಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News