×
Ad

​ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ

Update: 2022-04-03 10:29 IST

ಬೆಂಗಳೂರು : ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ  ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ  ಪ್ರಾರಂಭವಾಗಲಿದೆ. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News