×
Ad

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಎಎಪಿಗೆ ಸೇರ್ಪಡೆ

Update: 2022-04-03 12:31 IST

ಬೆಂಗಳೂರು, ಮಾ. 3: ಇತ್ತೀಚೆಗೆ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು (AAP) ಸೇರಲಿದ್ದಾರೆ.

ಹೊಸದಿಲ್ಲಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಪಕ್ಷ ಸೇರಲಿದ್ದಾರೆ. ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರರು ಹಾಜರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2021ರ ಸೆಪ್ಟೆಂಬರ್ ನಲ್ಲಿ ತಮ್ಮ ಹುದ್ದೆಗೆ ಭಾಸ್ಕರರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಕಳೆದ ವಾರ‌ವಷ್ಟೇ ಅಂಗೀಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News