×
Ad

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ 50 ಕೋಟಿ ರೂ. ವಾರ್ಷಿಕ ದಾಖಲೆಯ ಲಾಭಗಳಿಕೆ: ಡಾ. ರಾಜೇಂದ್ರ ಕುಮಾರ್

Update: 2022-04-03 16:48 IST

ಮಂಗಳೂರು: ಮಾರ್ಚ್ 2022 ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ 50.08 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷದ ಲಾಭ(ರೂ 33.55 ಕೋಟಿ)ಕ್ಕಿಂತ ಶೇಕಡ 48.82 ಏರಿಕೆಯಾಗಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಕ ದಾಖಲೆಯಾಗಿದೆ. ವಿಶೇಷವಾಗಿ ಕೋವಿಡ್‌ನಲ್ಲಿ ಮೃತಪಟ್ಟ 174 ರೈತ ಕುಟುಂಬಗಳಿಗೆ 1.52 ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಅಭಿವೃದ್ಧಿಯ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್) ಬ್ಯಾಂಕಿಂಗ್ ಸೇವೆಯಲ್ಲ: ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರಿ ರಂಗದಲ್ಲ, ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 109 ಶಾಖೆಗಳ ಮೂಲಕ ನೀಡುತ್ತಿರುವ ನಮ್ಮ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿ ಕೊಂಡಿದೆ. 108 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದಿದೆ. ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ 11598 ಕೋಟಿ ರೂ. ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಏರಿಕೆ ಕಂಡಿದೆ. 2022-23ನೇ ಸಾಲಿಗೆ ರೂ. 14000 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.

5649.97 ಕೋಟಿ ರೂ. ಠೇವಣಿ
ಸಾಮಾನ್ಯವಾಗಿ ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್ ತನ್ನ 109 ಶಾಖೆಗಳ ಮುಖಾಂತರ ಒಟ್ಟು ರೂ. 5649.97 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣಿಗಿಂತ ಈ ಬಾರಿ ಶೇ 14.11 ಏರಿಕೆಯಾಗಿದೆ.

ಸತತ 27 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ ಬ್ಯಾಂಕ್  ನಿರ್ಮಿಸಿ ಸಾದನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 27, ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ ಎಂದವರು ತಿಳಿಸಿದ್ದಾರೆ.

ಬ್ಯಾಂಕ್‌ಗೆ ಒಟ್ಟು 1031 ಸಂಘಗಳು ಸದಸ್ಯರಾಗಿವೆ. ಇವುಗಳಲ್ಲಿ 214.27 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ. 8711.10 ಕೋಟಿ ಆಗಿದ್ದು, ಇದು ಕಳೆದ 7154.82 ಕೋಟಿ) ಶೇಕಡ 21.75% ರಷ್ಟು ಏರಿಕೆ ಕಂಡಿದೆ.

*"ರೂಪೇ" (RuPay) ಕಿಸಾನ್ ಕ್ರೆಡಿಟ್ 

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ 1,24,833 ರುಪೇ ಕಿಸಾನ್ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ. 66,251 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.

ಕೋವಿಡ್‌ನಲ್ಲಿ ಮೃತಪಟ್ಟ 174 ರೈತ ಕುಟುಬಳಿಗೆ ಪರಿಹಾರ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಬೆಳೆಸಾಲ ಪಡೆದು ದಿನಾಂಕ 1-04-2020ರಿಂದ 30-06-2021ರ ಅವಧಿಯಲ್ಲಿ ಕೋವಿಡ್ ನಿಂದ ಮೃತ ಪಟ್ಟಿರುವ 174 ರೈತರ ಕುಟುಂಬಕ್ಕೆ ರೂ. 1,52,44,700/- ಪರಿಹಾರ ಮೊತ್ತವನ್ನು ನೀಡಲು ಬ್ಯಾಂಕ್ ಮುಂದಾಗಿದೆ. ಉಪ್ಪುಂದದಲ್ಲಿ ಬ್ಯಾಂಕಿನ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪರಿಹಾರ ಮೊತ್ತದ ಚೆಕ್ ಗಳನ್ನು ಸಾಂಕೇತಿಕ ವಾಗಿ ವಿತರಿಸಲಾ ಗುವುದು. ಮುಂದಿನ ಹಂತದಲ್ಲಿ ಡೆಬಿಟ್ ಕಾರ್ಡ್, ಅಂತರ್ ಬ್ಯಾಂಕಿಂಗ್ ಮೊಬೈಲ್ ಪಾವತಿ ಯೋಜನೆ, ಉಡುಪಿ ಗೆ ಮೊಬೈಲ್ ಬ್ಯಾಂಕಿಂಗ್, 15ಹೊಸ ಶಾಖೆ ಗಳನ್ನು ಆರಂಭಿಸಲಾಗುವುದು  ಎಂದು ರಾಜೇಂದ್ರ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ದೇವಿ ಪ್ರಸಾದ್ ಶೆಟ್ಟಿ, ಎಸ್.ಬಿ.ಜಯರಾಮ ರೈ,ಸಿಇಓ ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News