ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಪ್ರಕರಣ: ಬನ್ನಂಜೆ ರಾಜಾ ಸಹಿತ 8 ಮಂದಿಗೆ ಜೀವಾವಧಿ ಶಿಕ್ಷೆ

Update: 2022-04-04 08:03 GMT

ಬೆಳಗಾವಿ, ಎ.4: ಸುಮಾರು ಎಂಟೂವರೆ ವರ್ಷಗಳ ಹಿಂದೆ ನಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಉದ್ಯಮಿ, ಬಿಜೆಪಿ ಮುಖಂಡ ಆರ್.ಎನ್. ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಕೋಕಾ(ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ)  ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ದೋಷಿ ಎಂದು ಘೋಷಿಸಿರುವ ನ್ಯಾಯಾಲಯ ಓರ್ವನಿಗೆ  5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

ಆರ್.ಎನ್. ನಾಯ್ಕ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಂಭತ್ತನೇ ಆರೋಪಿಯಾದ ಬನ್ನಂಜೆ ರಾಜಾ, ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ವಿಜಯಪುರದ ಅಂಬಾಜಿ ಬಂಡುಗೋರ್, ಕಾರ್ಕಳದ ಮಂಜುನಾಥ ನಾರಾಯಣ ಭಟ್, ಅಚ್ಚಂಗಿ ಮಹೇಶ್, ಸುಳ್ಯ ಸಂತೋಷ್‍, ಜಗದೀಶ್ ಚಂದ್ರರಾಜ್ ಅರಸ್, ಅಂಕಿತ್ ಕುಮಾರ್ ಕಶ್ಯಪ್ ಎಂಬವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೇರಳದ ಕೆ.ಎಂ.ಇಸ್ಮಾಯೀಲ್‍ ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಅಂಕೋಲಾದ ಉದ್ಯಮಿಯಾಗಿದ್ದ ಆರ್.ಎನ್. ನಾಯ್ಕ್ ಅವರನ್ನು 2013ರ ಡಿಸೆಂಬರ್ 21ರಂದು ಕಾರಿನಲ್ಲಿ ಸಂಚರಿಸು‍ತ್ತಿದ್ದ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News