×
Ad

ಬಜ್ಪೆ : ಕೊರಕಂಬಳ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

Update: 2022-04-04 16:40 IST

ಬಜ್ಪೆ : ಇಲ್ಲಿನ ಪಡುಪೆರಾರದ ಕೊರಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಡಾ.ಭರತ್ ಶೆಟ್ಟಿ ಅವರು ಸೋಮವಾರ ಉದ್ಘಾಟಿಸಿದರು.

ಬಳಿಕ‌‌ ಮಾತನಾಡಿದ ಅವರು, ಅಂಗನವಾಡಿ ಕಾಮಗಾರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು ಎಂಆರ್ ಪಿಎಲ್ ಸಾಮಾಜಿಕ ಬದ್ಧತಾ ನಿಧಿಯಿಂದ ಒಟ್ಟು 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಂಆರ್ ಪಿಎಲ್ ನ ಸಿಎಸ್ ಆರ್ ಮ್ಯಾನೇಜರ್ ಶ್ರೀಶಾ, ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಮಿತಾ ಶೆಟ್ಟಿ, ಉಪಾಧ್ಯಕ್ಷೆ ಸೇಸಮ್ಮ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶೈಲಾ ಕೆ. ಕಾರಿಗಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಎನ್.ಸಿ. ನಾಗರಾಜು, ಪಂಚಾಯತ್ ನ ಸರ್ವ ಸದಸ್ಯರು, ಪಕ್ಷದ ಸ್ಥಳೀಯ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News