×
Ad

ಸಂಪಾಜೆಯಲ್ಲಿ ದರೋಡೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Update: 2022-04-04 23:11 IST

ಸುಳ್ಯ : ಸಂಪಾಜೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಇಬ್ಬರನ್ನು ಇಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ಇಬ್ಬರ ಪೈಕಿ 5ನೇ ಮುಖ್ಯ ಆರೋಪಿಯಾದ ಸೆಂದಿಲ್ ಕುಮಾರ್‌ ನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಂದು ವಾರ ನೀಡಲಾಗಿದ್ದು, ಇನ್ನೋರ್ವ ಆರೋಪಿ ಪಾಂಡಿ ಸೇಲ್ವಮ್‍ನನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ದರೋಡೆ ಪ್ರಕರಣದಲ್ಲಿ ಎಂಟರಿಂದ ಹನ್ನೆರಡು ಜನರ ತಂಡ ಇದ್ದರೆಂಬ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News