ಸಿವಿಲ್ ಇಂಜಿನಿಯರ್ ಸಂಘದ ಪದಾಧಿಕಾರಿಗಳ ಆಯ್ಕೆ
Update: 2022-04-05 19:06 IST
ಉಡುಪಿ : ಉಡುಪಿ ಜಿಲ್ಲಾ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಮತ್ತು ಅರ್ಚಿಟೆಕ್ಟ್ಸ್ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಇತ್ತೀಚೆಗೆ ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಜರಗಿತು.
ನೂತನ ಅಧ್ಯಕ್ಷ ಪಾಂಡುರಂಗ ಆಚಾರ್ ಹಾಗು ಇತರ ಪದಾಧಿಕಾರಿಗಳಿಗೆ ಬೆಂಗಳೂರಿನ ಲಯನ್ಸ್ ಜಿಲ್ಲಾ ಗವರ್ನರ್ ವಿಜಯ ಕುಮಾರ್ ಪ್ರಮಾಣ ವಚನ ಭೋದಿಸಿದರು. ಮುಖ್ಯ ಅತಿಥಿಯಾಗಿ ಉದ್ಯಮಿ ರವೀಂದ್ರ ನಾಯಕ, ಸಂಸ್ಥೆಯ ಗೌರವಾಧ್ಯಕ್ಷ ನಾಗೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಗೋಪಾಲ್ ಭಟ್, ಉಪಾಧ್ಯಕ್ಷರಾದ ಎಂ.ಡಿ. ಗಣೇಶ್, ಭಾಗವನ ದಾಸ್, ಮಾಜಿ ಕಾರ್ಯದರ್ಶಿ ಅಮಿತ್ ಅರವಿಂದ್, ನೂತನ ಖಂಚಾಚಿ ಲಕ್ಷ್ಮೀನಾರಾಯಣ ಉಪಾಧ್ಯ, ಜೊತೆ ಕಾರ್ಯದರ್ಶಿ ಶಶಿಧರ್ ಮೊದಲಾದವರು ಉಪಸ್ಥಿತರಿದ್ದರು.
ನೂತನ ಕಾರ್ಯದರ್ಶಿ ಯೋಗೀಶಚಂದ್ರ ವಂದಿಸಿದರು. ಜಗದೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಂಸ್ಥೆಯ ಸದಸ್ಯರಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.