ಮನೆಯ ಉಪ್ಪರಿಗೆ ಮೆಟ್ಟಿಲಿನಿಂದ ಬಿದ್ದು ಮೃತ್ಯು
Update: 2022-04-05 20:49 IST
ಬೈಂದೂರು : ಮನೆಯ ಉಪ್ಪರಿಗೆಗೆ ಹೋಗಲು ಮೆಟ್ಟಿಲುಗಳನ್ನು ಹತ್ತುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಕಂಬಂದಕೋಣೆ ಗ್ರಾಮದ ನಾಣನ ಮನೆ ಎಂಬಲ್ಲಿ ನಡೆದಿದೆ.
ಮೃತರನ್ನು ಗೋವಿಂದ ದೇವಾಡಿಗ(48) ಎಂದು ಗುರುತಿಸಲಾಗಿದೆ. ಬೇಸಾಯ ಹಾಗೂ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಉಪ್ಪರಿಗೆಗೆ ಹೋಗಲು ಮೆಟ್ಟಿಲುಗಳನ್ನು ಹತ್ತುವಾಗ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎ೫ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.