×
Ad

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ; ಆರೋಪಿಗಳಿಗೆ ಗುಂಡೇಟು

Update: 2022-04-05 20:55 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.5: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪದಡಿ ಇಬ್ಬರ ಮೇಲೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಸಂಪಿಗೆಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ಮೂಲದ ಅಶಿಕ್ ಮತ್ತು ಇಸಾಕ್ ಬಂಧಿತ ಆರೋಪಿಗಳಾಗಿದ್ದು, ಇವರು ರೌಡಿಪಟ್ಟಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಾ.26ರಂದು ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಕಾರನ್ನು ಅಡ್ಡಗಟ್ಟಿದ ಆರೋಪಿಗಳು ಸುಲಿಗೆ ಮಾಡಿದ್ದರು. ಈ ಸಂಬಂಧ ಆರೋಪಿಗಳು ನೆಲೆಸಿರುವ ಮಾಹಿತಿ ಮೇರೆಗೆ ಕೊತ್ತನೂರು ಇನ್‍ಸ್ಪೆಕ್ಟರ್ ಮತ್ತು ತಂಡ ಬಂಧಿಸಲು ತೆರಳಿದ್ದಾಗ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಉಮೇಶ್ ಎದೆಗೆ ಚಾಕು ಇರಿದಿದ್ದರು ಎನ್ನಲಾಗಿದೆ.

ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳ ಮೇಲೆ ಗುಂಡು ಹಾರಿಸಿ, ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News