×
Ad

ಪ್ರಧಾನಿ ಮೋದಿಗೆ ಸುಭಾಷ್ ಚಂದ್ರ ಬೋಸ್ ಪ್ರತಿಮೆ ನೀಡಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್

Update: 2022-04-05 21:25 IST

ಮೈಸೂರು,ಎ.5: ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅರುಣ್ ಯೋಗಿರಾಜ್ ಮಂಗಳವಾರ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು ಈ ವೇಳೆ ಮೋದಿ ಅವರಿಗೆ ಅರುಣ್ ಯೋಗಿರಾಜ್  ಅವರು ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನ ಉಡುಗೊರೆಯಾಗಿ ನೀಡಿದರು.

ಈ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾಗಿರುವ ಶಂಕರಾಚಾರ್ಯರ ಪ್ರತಿಮೆಯನ್ನ  *ಶಿಲ್ಪಿ ಯೋಗಿರಾಜ್ ನಿರ್ಮಿಸಿದ್ದರು. ಇನ್ನು ಅರುಣ್ ಯೋಗಿರಾಜ್  ಅವರ ಬಗ್ಗೆ  ಸ್ವತಃ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ*.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News