ಬಜ್ಪೆ: ಗಾಂಜಾ ಸೇವಿಸಿದ್ದ ಆರೋಪದಲ್ಲಿ ಯುವಕ ಸೆರೆ
Update: 2022-04-06 09:36 IST
ಬಜ್ಪೆ: ಇಲ್ಲಿನ ಶಾಂತಿಗುಡ್ಡೆ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಯುವಕ ನೋರ್ವನನ್ನು ಬಜ್ಪೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತನನ್ನು ಶಾಂತಿಗುಡ್ಡೆ ನಿವಾಸಿ ನವೀನ್ ಕುಮಾರ್ ಯಾನೆ ಅಶೋಕ್ ಎಂದು ತಿಳಿದು ಬಂದಿದೆ.
ಪೊಲೀಸ್ ಠಾಣೆಯ ಪಿಎಸ್ಐ ಕಮಲಾ ಅವರು ಇಲಾಖೆಯ ವಾಹನದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಶಾಂತಿಗುಡ್ಡೆ ಬಸ್ ನಿಲ್ದಾಣದ ಬಳಿ ನವೀನ್ ಕುಮಾರ್ ಯಾನೇ ಅಶೋಕ್ ಎಂಬಾತ ಅಮಲು ಪದಾರ್ಥ ಸೇವಿಸಿ ರುವ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಆತ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಆತನನ್ನು ವಶಕ್ಕೆ ಪಡೆದ ಪಿಎಸ್ಐ ಕಮಲಾ ಅವರು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಗೆ ಒಳಪಡಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.