ಎ.8ರಂದು ‘ತ್ವಿಷ- 2022’ ರಾಷ್ಟ್ರೀಯ ಸಮ್ಮೇಳನ
ಉಡುಪಿ, ಎ.6: ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮರಣಾರ್ಥವಾಗಿ ಗರದೂಷಿ ವಿಷದ ಪರಿಣಾಮಗಳು ಮತ್ತು ಚಿಕಿತ್ಸೆ ಕುರಿತು ‘ತ್ವಿಷ- ೨೦೨೨’ ರಾಷ್ಟ್ರೀಯ ಸಮ್ಮೇಳನವು ಎ.೮ರಂದು ಬೆಳಗ್ಗೆ ೧೦ಗಂಟೆಗೆ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಲಿದೆ.
ಸಮ್ಮೇಳನವನ್ನು ನೇಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಇದರ ಅಧ್ಯಕ್ಷ ವೈದ್ಯ ಜಯಂತ್ ದೇವು ಪೂಜಾರಿ ಉದ್ಘಾಟಿಸ ಲಿರುವರು. ಹಾಸನ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸನ್ನ ರಾವ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿರುವರು ಎಂದು ಸಮ್ಮೇಳನದ ಮುಖ್ಯ ಕಾರ್ಯದರ್ಶಿ ಡಾ.ಚೈತ್ರಾ ಹೆಬ್ಬಾರ್ ಸುದ್ದಿಗೋಷ್ಠಿಯಲ್ಲಿ ಇಂದು ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ದೇಶದ ಹಲವು ರಾಜ್ಯಗಳಿಂದ ಸುಮಾರು ೩೦೦ ಪ್ರತಿನಿಧಿ ಗಳು ಭಾಗವಹಿಸಿ, ೨೦೦ ಪ್ರತಿನಿಧಿಗಳು ವಿವಿಧ ವಿಷಯಗಳ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಸಂಜೆ ೪ಗಂಟೆಗೆ ಉಡುಪಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಾ.ಶ್ರೀನಿಧಿ ಆರ್., ಡಾ.ಶ್ರೀಜಿತ್ ಕೆ., ಡಾ.ಪದ್ಮಕಿರಣ್, ಡಾ.ರವಿಕೃಷ್ಣ ಎಸ್. ಉಪಸ್ಥಿತರಿದ್ದರು.