×
Ad

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 225 ಮಂದಿ ಗೈರುಹಾಜರಿ

Update: 2022-04-06 19:23 IST

ಉಡುಪಿ : ಜಿಲ್ಲೆಯ ೫೬ ಸಾಮಾನ್ಯ ಹಾಗೂ ಎರಡು ಖಾಸಗಿ ಕೇಂದ್ರಗಳು ಸೇರಿದಂತೆ ಒಟ್ಟು ೫೮ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ನಡೆದ ಎಸೆಸೆಲ್ಸಿಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 225 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ ಒಟ್ಟು ೧೩೯೯೭ ವಿದ್ಯಾರ್ಥಿಗಳಲ್ಲಿ ೧೩೭೭೨ ಮಂದಿ ಇಂದು ಹಾಜರಾಗಿದ್ದು ೨೨೫ ಮಂದಿ ಗೈರುಹಾಜರಾಗಿದ್ದಾರೆ. ಈ ಸಂದರ್ಭದಲ್ಲಿ ೧೪ ವಿದ್ಯಾರ್ಥಿಗಳು ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದು, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಯಾರೂ ಪರೀಕ್ಷೆ ಬರೆದಿಲ್ಲ. ಜಿಲ್ಲೆಯ ೫೮ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.

ಜಿಲ್ಲೆಯ ೧೭ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಸಂಚಾರಿ ವಿಚಕ್ಷಣಾ ದಳ, ಸ್ಥಾನಿಕ ಜಾಗೃತ ದಳ, ಜಿಲ್ಲಾ ಮತ್ತು ತಾಲೂಕು ಉಸ್ತುವಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದ್ದು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಯಾವುದೇ ಅಹಿತಕರ ಘಟನೆ ನಡೆಯದೇ ಪರೀಕ್ಷೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News