×
Ad

ದೇರಳಕಟ್ಟೆ; ರಸ್ತೆ ವಿಭಜಕ ದಾಟಿ ಬೈಕ್ ಗೆ ಢಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಾಯ

Update: 2022-04-07 07:44 IST

ಕೊಣಾಜೆ : ದೇರಳಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು  ದಾರಿದೀಪಗಳಿಗೆ  ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾರು ಚಾಲಕ ಸೊಫೈಲ್ ಹಾಗೂ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಣಾಜೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಮಧ್ಯ ಅಳವಡಿಸಲಾದ ದಾರಿದೀಪದ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ವಿಭಜಕ ಏರಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News