ದಿಲ್ಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-04-07 04:51 GMT

ಹೊಸದಿಲ್ಲಿ, ಎ.7: ಈ ಬಾರಿಯ ತನ್ನ ದಿಲ್ಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಬೆಳಗ್ಗೆ ಹೊಸದಿಲ್ಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

 ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಎ.16 ಮತ್ತು 17ರಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಬೊಮ್ಮಾಯಿ ಹೇಳಿದರು.

ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಮಹತ್ವ

ಬೆಂಗಳೂರಿಗೆ ಹಿಂದಿರುಗಿದ ನಂತರ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಆದೇಶಗಳನ್ನು ನೀಡಿ ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.

ಎ.16 ಮತ್ತು 17ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಎ.16 ಮತ್ತು 17ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಸೂಚನೆಗಳನ್ನು ನೀಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News