×
Ad

ಆಕಾರ್ ಪಟೇಲ್ ವಿರುದ್ಧ ಲುಕ್ ಔಟ್ ಸುತ್ತೋಲೆ ತಕ್ಷಣವೇ ಹಿಂಪಡೆಯಿರಿ: ಸಿಬಿಐಗೆ ದಿಲ್ಲಿ ನ್ಯಾಯಾಲಯ ಆದೇಶ

Update: 2022-04-07 17:21 IST

ಹೊಸದಿಲ್ಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪ್ರಕರಣದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ವಿರುದ್ಧ ಹೊರಡಿಸಲಾದ ಲುಕ್ ಔಟ್ ಸುತ್ತೋಲೆಯನ್ನು ತಕ್ಷಣವೇ ಹಿಂಪಡೆಯುವಂತೆ ದಿಲ್ಲಿ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಗುರುವಾರ ಆದೇಶಿಸಿದೆ.

ಬುಧವಾರ ತನಗೆ ಅಮೆರಿಕ ವಿಮಾನ ಹತ್ತುವುದನ್ನು ತಡೆದ ನಂತರ ಪಟೇಲ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಪಟೇಲ್ ಅವರು ಮೇ 30, 2022 ರವರೆಗೆ ಅಮೆರಿಕಕ್ಕೆ ಪ್ರಯಾಣಿಸಲು ನ್ಯಾಯಾಲಯದಿಂದ ಅನುಮತಿ ಕೋರಿದರು.

"ನಿರ್ದಿಷ್ಟವಾಗಿ" ಪ್ರವಾಸಕ್ಕೆ ಅನುಮತಿ ನೀಡಿದ ಗುಜರಾತ್ ನ್ಯಾಯಾಲಯದ ಆದೇಶದ ಹೊರತಾಗಿಯೂ ತಾನು ಅಮೆರಿಕಕ್ಕೆ ಪ್ರಯಾಣಿಸುವುದನ್ನು ತಡೆಯಲಾಗಿದೆ ಎಂದು ಪಟೇಲ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News