×
Ad

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಮುಹಮ್ಮದ್ ನಲಪಾಡ್ ದೂರು

Update: 2022-04-07 18:58 IST

ಬೆಂಗಳೂರು, ಎ.7: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮುಹಮ್ಮದ್ ನಲಪಾಡ್ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ.

ಗುರುವಾರ ಇಲ್ಲಿನ ಕಬ್ಬನ್ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಅವರಿಗೆ ದೂರು ಸಲ್ಲಿಕೆ ಮಾಡಿದ ಅವರು, ಜೆಜೆ ನಗರ ಚಂದ್ರು ಕೊಲೆ ಸಂಬಂಧ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆಗ್ರಹಿಸಿದರು.

ಅಲ್ಲದೆ, ಆರಗ ಜ್ಞಾನೇಂದ್ರ ಚಿಕ್ಕ ಮಗುವಲ್ಲ ಪದೇ ಪದೇ ಹೇಳಿಕೆ ಬದಲಾವಣೆ ಮಾಡಲು. ಅವರು ಸತತ ಮೂರನೇ ಬಾರಿಗೆ ಈ ರೀತಿಯ ವಿವಾದಿತ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸವನ್ನು ಸ್ವತಃ ಗೃಹ ಸಚಿವರೇ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:  "ಉರ್ದು ಮಾತಾಡದ್ದಕ್ಕೆ ಕೊಲೆ ಮಾಡಲಾಗಿದೆ" ಎಂದು ಹೇಳಿಕೆ ನೀಡಿ ಬಳಿಕ ಕ್ಷಮೆ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News