ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-04-07 13:57 GMT

ಬೆಂಗಳೂರು, ಎ.7: ದೇಶದ ಈಶಾನ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎ. 8, 9, 10 ಮತ್ತು 11ರಂದು ಮಳೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎ.10ರವರೆಗೆ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರ ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News