ನೇಣು ಬಿಗಿದುಕೊಂಡು ಆತ್ಮಹತ್ಯೆ
Update: 2022-04-07 22:16 IST
ಉಳ್ಳಾಲ : ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಇದರಿಂದ ನೊಂದ ಪತಿ ಮಾನಸಿಕ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಳ್ಳಾಲ ಸಿ ಗ್ರೌಂಡ್ ನಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಅಶ್ವತ್(50) ಎಂದು ಗುರುತಿಸಲಾಗಿದೆ
ಅವರ ಪತ್ನಿ ಕೆಲವು ಸಮಯದಿಂದ ರೋಗದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿಯನ್ನು ಕೆಲ ಕಾಲ ನೋಡಿ ಕೊಂಡ ಅಶ್ವತ್ ಖಿನ್ನತೆ ಆಸ್ಪತ್ರೆ ದಾಖಲು ಆಗಿದ್ದರು. ಈ ಬಗ್ಗೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ನಿನ್ನೆ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಪತ್ನಿಯ ರೋಗದಿಂದ ನೊಂದ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.