ಬೈಕ್- ಕಾರು ಢಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
Update: 2022-04-07 22:24 IST
ಕಲಬುರಗಿ: ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ಬೈಕ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಡ್ರಾಮಿ ತಾಲೂಕು ಕೋಣಶಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ (30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹಾಗಾಗಿ, ಸಂಬಂಧಿಕರಿಗೆ ಮದುವೆ ಆಹ್ವಾನ ಪತ್ರ ನೀಡಲು ಜೇರಟಗಿಯತ್ತ ತೆರಳುತ್ತಿದ್ದರು. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ವಿಜಯಪುರ ಜಿಲ್ಲೆಗೆ ಸೇರಿದ ಕಾರು ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ
ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.