ಕಲಬುರಗಿ: ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮಹಿಳೆ ಮೃತ್ಯು
Update: 2022-04-07 22:31 IST
ಕಲಬುರಗಿ: ಯಡ್ರಾಮಿ ತಾಲೂಕಿನ ಹೊರವಲಯದ ಕ್ಯಾನಲ್ ನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟಿದ್ದು, ಇನ್ನೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾದೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆಯ ಹೆಸರು ಕವಿತಾ ಬಾಯಿ ರಮೇಶ್ ಪವರ್ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮೂವರಿಗೆ ಸಣ್ಣಪುಟ ಗಾಯಗಳಾಗಿದ್ದು, ಗಾಯಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನ ಸ್ಥಳಕ್ಕೆ ಯಡ್ರಾಮಿ ಪೊಲೀಸರು ಭೇಟಿ ನೀಡಿ ಮೃತ ಮಹಿಳೆಯ ದೇಹವನ್ನು ಹೊರತೆಗೆಯಲಾಗಿದೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.