ಎ. 9ರಂದು ಮಂಗಳೂರು ಪೊಲೀಸ್ ಹಬ್ಬ
Update: 2022-04-08 18:29 IST
ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ಆಶ್ರಯದಲ್ಲಿ ಎ. 9ರಂದು ಮಂಗಳೂರು ಪೊಲೀಸ್ ಹಬ್ಬ ಆಯೋಜಿಸಲಾಗಿದೆ.
ಕಂಕನಾಡಿಯ ಫಾದರ್ ಮುಲ್ಲರ್ ಸಭಾಭವನದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರಿಗಾಗಿ ವಿವಿಧ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಂಗೋಲಿ, ಸುಡುಕು , ಚಿತ್ರಕಲಾ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಸಂಜೆ 5 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಗುಂಪು ನೃತ್ಯ, ಸಂಗೀತ ಕಾರ್ಯಕ್ರಮಗಳ ಜತೆಗೆ ಕೊಪ್ಪರಿಗೆ ಎಂಬ ನಾಟಕ ಪ್ರದರ್ಶನವೂ ನಡೆಯಲಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.