×
Ad

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2022-04-08 19:46 IST

ಉಡುಪಿ : ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಎ.೧೦, ೧೧, ೧೩ ಹಾಗೂ  ೧೪ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಎ.೧೦ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು, ಎ.೧೧ರಂದು ಮುಖ್ಯಮಂತ್ರಿ ಗಳೊಂದಿಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬಳಿಕ ಅವರು ಸಿಗಂದೂರಿಗೆ ತೆರಳುವರು. ಎ.೧೩ರ ಸಂಜೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ.

ಎ.೧೪ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಾವೀರ ಜಯಂತಿ ಹಾಗೂ ೧೦ ಗಂಟೆಗೆ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ತೆರಳಲಿರುವರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News