×
Ad

ದ.ಕ. ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷರಾಗಿ ಬಿ.ಎ.ಅಬ್ದುಲ್ ನಾಸೀರ್ ಲಕ್ಕಿಸ್ಟಾರ್

Update: 2022-04-08 19:53 IST
ಅಬ್ದುಲ್ ನಾಸೀರ್ ಲಕ್ಕಿಸ್ಟಾರ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶ ಹೊರಡಿಸಿದೆ.

ನಾಸೀರ್ ಅವರು ಶುಕ್ರವಾರ ಮಂಗಳೂರಿನಲ್ಲಿ ಜಿಲ್ಲಾ ವಕ್ಫ್ ಕಚೇರಿ ಮೌಲಾನಾ ಆಝಾದ್ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಹಿಂದಿನ ಸಮಿತಿಯ ಅವಧಿ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ.

ನಾಸೀರ್ ಅವರು ಲಕ್ಕಿಸ್ಟಾರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಮುಖ್ಯಸ್ಥರಾಗಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಅಧ್ಯಕ್ಷರಾಗಿ ಹಾಗೂ ಬೈಕಂಪಾಡಿ ಮೊಹಿಯುದ್ದೀನ್ ಜುಮ್ಮಾ‌ ಮಸೀದಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೈಕಂಪಾಡಿಯ ಹಿರಿಯ ಉದ್ಯಮಿಯಾಗಿದ್ದ ದಿವಂಗತ ಬಿ.ಕೆ. ಅಬೂಬಕ್ಕರ್ ಲಕ್ಕಿಸ್ಟಾರ್ ಅವರ ಪುತ್ರನಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News