ಎಕ್ಕೂರಿನಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2022-04-09 14:02 IST
ಉಳ್ಳಾಲ, ಎ.9: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಮೃತರನ್ನು ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಲಾರಿಯು ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರ ಠಾಣಾ ಪೊಲೀಸರು ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರವಿ ಕುಮಾರ್ ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದರು.